ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚಾಗುತ್ತಿದ್ದು, ಎಲ್ಲಾ ವರ್ಗದ ರೋಗಿಗಳಿಗೆ ಅನುಕೂಲವಾಗುವ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷಾ ದರವನ್ನು 500ಕ್ಕೆ ಇಳಿಸಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು, ಈ ನಿರ್ಧಾರವನ್ನು ವಿಧಾನಸೌಧದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಸಭೆ ಬಳಿಕ ಸರ್ಕಾರಿ ಆಸ್ಪತ್ರೆಗಳಿಂಗ ಖಾಸಗಿ ಪ್ರಯೋಗಾಲಗಳಿಗೆ ಹೋಗಿ ಗಂಟಲ ದ್ರವ ಪರೀಕ್ಷೆ ದರವನ್ನು 2 ಸಾವಿರದಿಂದ ರೂ.1,500ಕ್ಕೆ ಇಳಿಕೆ ಮಾಡಲಾಗಿದೆ. ಹಾಗೆಯೇ ನೇರವಾಗಿ ಖಾಸಗಿ ಪ್ರಯೋಗಾಲಯಗಳಿಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡವರಿಗೆ ರೂ.3 ಸಾವಿರ ವಿಧಿಸಲಾಗುತ್ತಿದ್ದ ದರವನ್ನು ಕೂಡ ರೂ.,500ಕ್ಕೆ ಇಳಿಕೆ ಮಾಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುವ ಬಗ್ಗೆ ಈಗಾಗಲೇ ಐಸಿಎಂಆರ್ ಎಚ್ಚರಿಕೆ ನೀಡಿದ್ದು, ನೂತನವಾಗಿ 20 ಲಕ್ಷ ರ್‍ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಮತ್ತು 18 ಆರ್’ಟಿಪಿಸಿಆರ್ ಪರೀಕ್ಷೆ ಕಿಟ್ ಗಳನ್ನು ಖರೀದಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಹಾಗೂ ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಇನ್ನು ದರ ಕಡಿತವು ಎಲ್ಲಾ ವರ್ಗದ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಸ್ಟಿರೋಲಜಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಪ್ರಸ್ತುತ 18 ಸಾವಿರ ಜನಕ್ಕೆ ಸ್ಟಿರೋಲಜಿ ಪರೀಕ್ಷೆ ಮಾಡಲಾಗುವುದು. ಈ ಪರೀಕ್ಷೆಗಾಗಿ 1.90 ಕೋಟಿ ವೆಚ್ಚವಾಗಲಿದೆ 18 ಸಾವಿರ ಆ್ಯಂಟಿಬಾಡಿ ಪರೀಕ್ಷೆ ಕೂಡ ಮಾಡಲಾಗುತ್ತಿದೆ ಎಂದರು.
ಈ ಮಧ್ಯೆ ಮರಣ ಪ್ರಮಾಣವೂ ಅಧಿಕವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಅದಕ್ಕಾಗಿ ಕೆಲ ಪರೀಕ್ಷೆಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತು ಖಾಸಗಿ ಪ್ರಯೋಗಾಲಯಗಳಲ್ಲಿ ಮಾಡುವುದರಿಂದ ರೋಗದ ಹಂತ ತಿಳಿದು ಚಿಕಿತ್ಸೆ ನೀಡಿ ಮರಣ ಪ್ರಮಾಣ ಕಡಿಮೆ ಮಾಡಬಹುದು. ಅಂತೆಯೇ ಪ್ಲಾಸ್ಮಾ ಥೆರಪಿ ರಾಜ್ಯದೆಲ್ಲೆಡೆ ವಿಸ್ತರಿಸಿ, ಆ ಮೂಲಕ ಥೆರಪಿ ಕೊಡಲು ಎಲ್ಲಾ ಕಡೆ ವ್ಯವಸ್ಥೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here