ಬಂಟ್ವಾಳ: ಹಿರಿಯರು ಗಳಿಸಿ ಕೊಟ್ಟ ಸ್ವಾತಂತ್ರ್ಯವನ್ನು ಉಳಿಸುವ ಸಲುವಾಗಿ ದೃಢ ಮನಸ್ಸನ್ನು ಹೊಂದಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ. ಅವರವರು ತಂತಮ್ಮ ಕೆಲಸ ಕಾರ್ಯಗಳಲ್ಲಿ ತಲ್ಲೀನವಾಗಿ ತೊಡಗಿಸಿಕೊಂಡು ದೇಶದ ಸದೃಢತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಈ ಮೂಲಕ ದೇಶದ ರಕ್ಷಣೆಯನ್ನು ಪ್ರತ್ಯಕ್ಷ ಪರೋಕ್ಷವಾಗಿ ಮಾಡಲು ಸಾಧ್ಯವಿದೆ ಎಂದು ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿ. ಸುಬ್ರಹ್ಮಣ್ಯ ಭಟ್ ಹೇಳಿದರು.

ಅವರು ತುಂಬೆ ಕಾಲೇಜಿನಲ್ಲಿ ಏರ್ಪಡಿಸಿದ್ದ 74ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಧ್ವಜಾರೋಹಣಗೈದು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಮಾತನಾಡಿ, ಮಹಾತ್ಮಾ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆ ಕೋವಿಡ್-19 ನಂತಹ ಸಂದಿಗ್ಧ ಪರಿಸ್ಥಿತಿಗೂ ಪ್ರಸ್ತುತವಾಗಿದೆ. ಸ್ವಾತಂತ್ರ ಹೋರಾಟಗಾರರ ಆದರ್ಶವನ್ನು ಅವರು ಹಾಕಿ ಕೊಟ್ಟ ಮಾರ್ಗವನ್ನು ನಾವೆಲ್ಲ ಅನುಸರಿಸಬೇಕು ಎಂದು ಹೇಳಿದರು.

ತುಂಬೆ ಸೆಂಟ್ರಲ್ ಸ್ಕೂಲ್ ನ ಮುಖ್ಯ ಶಿಕ್ಷಕಿ ವಿದ್ಯಾಕೆ., ತುಂಬೆ ಆಂಗ್ಲ ಮಾಧ್ಯಮ ಶಾಲಾ ಮುಖ್ಯಸ್ಥ ಆಲ್ವಿನ್ವಿಲ್ಸನ್ಪಿರೇರಾ, ಯೋಗೀಶ್ಬೊಳ್ಳಾರಿ ಮತ್ತಿತರರು ಉಪಸ್ಥಿತರಿದ್ದರು.

ತುಂಬೆ ಕನ್ನಡ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ಕೆದಿಲಆನ್‍ಲೈನ್ಕ್ಲಾಸ್ಬಗ್ಗೆ ಮಾಹಿತಿ ನೀಡಿದರು. ಕಛೇರಿ ಅಧೀಕ್ಷಕ ಅಬ್ದುಲ್ಕಬೀರ್ಬಿ ನಿರೂಪಿಸಿ, ದೈಹಿಕ ಶಿಕ್ಷಕ ಸಾಯಿರಾಂ ನಾಯಕ್, ಜಗದೀಶ್ರೈಬಿ., ತಿಮೋಲಿಎಡ್ನಾಗೊನ್ಸಾಲ್ವ್ಸ್ಸಸಹಕರಿಸಿದರು.

 

 

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here