ಬಂಟ್ವಾಳ : ಪುದು ಗ್ರಾಮದ ಸುಜೀರ್ ಸರಕಾರಿ ಪ್ರೌಢಶಾಲೆಯಲ್ಲಿ ಇಂದು 74ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಮಾಜಿ ಜಿ.ಪಂ. ಸದಸ್ಯ, ಶಾಲಾಭಿವೃದ್ಧಿ ಅಧ್ಯಕ್ಷ ಉಮರ್ ಫಾರೂಕ್ ಫರಂಗಿಪೇಟೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕೊರೊನಾ ಮಹಾಮಾರಿ ಕಾರಣ ಈ ವರ್ಷ ಶಾಲೆಯಲ್ಲಿ ನಡೆಯುವ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಪಾಲ್ಗೊಳ್ಳಲು ಸಾಧ್ಯವಾಗಿಲ್ಲದಿರುವುದು ಒಂದು ರೀತಿಯ ಬೇಸರದ ವಿಚಾರ ಕೂಡ ಹೌದು, ಸ್ವಾತಂತ್ರ್ಯದ ಅನೇಕ ವಿಚಾರಗಳನ್ನು, ಹೋರಾಟದಲ್ಲಿ ಮಹನೀಯರ ಬಗ್ಗೆ ಮಕ್ಕಳಿಗೆ ಸ್ವಾತಂತ್ರ್ಯ ದ ದಿನಾಚರಣೆಯ ಸಂದರ್ಭದಲ್ಲಿ ತಿಳಿಸುವ ಜವಬ್ದಾರಿ ನಮ್ಮದಾಗಿತ್ತು. ಅದರೆ ಮಕ್ಕಳ ಆರೋಗ್ಯ ಮುಖ್ಯ ಎಂಬ ದೃಷ್ಟಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ ಎಂದು ಅವರು ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹೋರಾಟದ ನೆನಪು ಕೇವಲ ಒಂದು ದಿನಕ್ಕೆ ಸೀಮಿತಗೊಳ್ಳದೆ, ಅದರ ನೆನಪು ಸದಾ ನಾವು ಮಾಡಿಕೊಳ್ಳಬೇಕಾಗಿದೆ. ಅವರ ಆದರ್ಶಗಳು, ವಿಚಾರಧಾರೆಗಳನ್ನು ಅಳವಡಿಸಿಕೊಂಡು ಸಂಪತ್ಬರಿತ ರಾಷ್ಟ್ರದ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ದರಾಗೋಣ ಎಂದು ಹೇಳಿದರು.

ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪುದು ಗ್ರಾ.ಪಂ. ಉಪಾಧ್ಯಕ್ಷ ಲಿಡಿಯೋ ಪಿಂಟೋ, ಪಂಚಾಯತ್ ಸದಸ್ಯ ಇಕ್ಬಾಲ್ ಸುಜೀರ್, ಮುಖ್ಯ ಶಿಕ್ಷಕಿ ಜ್ಯೋತಿ ಮೇಡಮ್, ಜಯಪ್ರಕಾಶ್, ಅಬೂಬಕ್ಕರ್ ಫರಂಗಿಪೇಟೆ ಮಜೀದ್ ಫರಂಗಿಪೇಟೆ ಕಿಶೋರ್ ಸುಜೀರ್ ಕೆ. ಮ್. ಅಶ್ರಫ್ ಮಲ್ಲಿ ಸಿದ್ದಿಕ್ ಸುಜೀರ್ ಗುಡ್ಡೆ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆ ಬಿ. ಮ್. ಮುಹಮ್ಮದ್ ಮಾಸ್ಟರ್ ತುಂಬೆ ಮಾಡಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here