


ಬಂಟ್ವಾಳ: ಮಾಣಿ ಯುವಕ ಮಂಡಲದ ಆಶ್ರಯದಲ್ಲಿ ಸ್ವಾತಂತ್ರೋತ್ಸವ ಆಚರಣೆ ಮಾಣಿ ಗಾಂಧಿ ಮೈದಾನದಲ್ಲಿ ಜರಗಿತು.
ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ, ಕೊಡಾಜೆ ಧ್ವಜಾರೋಹಣಗೈದರು.
ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು, ಮಾಣಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಣಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಇಬ್ರಾಹಿಂ.ಕೆ.ಮಾಣಿ, ಸೂರಿಕುಮೇರು ಬದ್ರಿಯಾ ಮಸೀದಿಯ ಅಧ್ಯಕ್ಷ ಮೂಸೆ ಕರೀಂ, ಪ್ರಮುಖರಾದ ಪುಷ್ಪರಾಜ ಶೆಟ್ಟಿ ಸಾಗು, ಮಾಣಿ ಯುವಕ ಮಂಡಲದ ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಕ್ರೀಡಾ ಕಾರ್ಯದರ್ಶಿ ದಯಾನಂದ ಪೂಜಾರಿ, ಯುವಕ ಮಂಡಲದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.





