



ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರು ಧ್ವಜಾರೋಹಣ ನೆರೆವೇರಿಸಿದರು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಾಜಿ ಸಚಿವ ಬಿ. ರಮಾನಾಥ ರೈ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ನಲ್ಲಿ ಸಸಿ ನೆಡುವ ಮೂಲಕ ದಿನಾಚರಣೆಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪುರಭಸ ಸದಸ್ಯರುಗಳಾದ ಜನಾರ್ದನ ಚಂತಿಮಾರ್, ಲುಕ್ಮಾನ್, ಗಂಗಾಧರ್, ಬೂಡಾ ಮಾಜಿ ಅಧ್ಯಕ್ಷರಾದ ಸದಾಶಿವ ಬಂಗೇರ, ಇಬ್ರಾಹಿಂ ನವಾಝ್ ಬಡಕಬೈಲ್, ವಿಶ್ವಜಿತ್ ಶೆಟ್ಟಿ, ಸುರೇಶ್ ಜೋರ, ಪವನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.






