ಬಂಟ್ವಾಳ: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಮೊಬೈಲ್ ಆಪ್ ಪೂರಕವಾಗಿ ದ್ದು ಆವರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು ‌
ಅವರು ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರ ಮನೆಯಲ್ಲಿ ರಾಜ್ಯ ಸರಕಾರ ಹೊಸದಾಗಿ ಅನುಷ್ಠಾನಗೊಳಿಸಿರುವ ರೈತರೇ ಬೆಳೆ ಸಮೀಕ್ಷೆ ಮಾಡುವ ಮೊಬೈಲ್ ಆಪ್ ಗೆ ಬಂಟ್ವಾಳ ತಾಲೂಕು ಮಟ್ಟದಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಚಾಲನೆ ನೀಡಿದರು.


ರೈತರ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಬದ್ದವಾಗಿದ್ದು, ಇದಕ್ಕೆ ಕಾರಣಕರ್ತರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮೊಬೈಲ್ ಆಪ್ ಕರಪತ್ರ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು.
ಬಳಿಕ ಅಡಿಕೆ ಮರ ಹತ್ತುವ ಯಂತ್ರ ದ ಮೂಲಕ ಗಣಪತಿ ಭಟ್ ಮತ್ತು ಅವರ ಮಗಳು ಪ್ರಾತ್ಯಕ್ಷಿಕೆ ನೀಡಿದರು. ಈ ಯಂತ್ರಕ್ಕೆ ಸಹಾಯಧನ ಕೊಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಈಗಾಗಲೇ ಅನೇಕ ಕೃಷಿಕರು ಈ ಯಂತ್ರ ಸದುಪಯೋಗ ಪಡಿಸಿಕೊಂಡ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಇದಕ್ಕೂ ಮೊದಲು ಕಾರಣೀಕ ಕ್ಷೇತ್ರ ಶ್ರೀ ಕಲ್ಲುರ್ಟಿ ದೇವಸ್ಥಾನ ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬೂಡ ಆದ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಆಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಸಂಕೇಶ, ಸುಲೋಚನ ಜಿ.ಕೆ.ಭಟ್, ರಾಮ್ ದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಪ್ರಕಾಶ್ ಅಂಚನ್, ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರವೀಣ್ ಗಟ್ಟಿ, ಯಶವಂತ ನಗ್ರಿ, ಸೀತರಾಮ ಆಗರಿಬೆಟ್ಟು, ಲೋಹಿತ್ ಪಣೋಲಿಬೈಲು,
ತಹಶಿಲ್ದಾರ್ ರಶ್ಮಿ ಎಸ್. ಆರ್., ಜಂಟಿ ಕೃಷಿ ನಿರ್ದೇಶಕಿ ಸೀತಾ, ತಾ.ಪಂ.ಇ.ಒ.ರಾಜಣ್ಣ, ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪ್ರದೀಪ್ ಡಿ.ಸೋಜ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಪಣೋಲಿಬೈಲು ಕಾರ್ಯನಿರ್ವಣಾಧಿಕಾರಿ ಪ್ರವೀಣ್,ಗ್ರಾಮ ಕರಣೀಕರಾದ ಸ್ವಾತಿ, ಧರ್ಮಸಾಮ್ರಾಜ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here