ಮಂಗಳೂರು : ಹಿರಿಯ ಉದ್ಯಮಿ, ಸಮಾಜ ಸೇವಕ, ಸಮುದಾಯದ ಹಿರಿಯ ನಾಯಕ, ಪ್ರತಿಷ್ಠಿತ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ, ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ (89) ಅವರು ಇಂದು ಸುಮಾರು 11.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 ಗಂಟೆಯ ಬಳಿಕ ತುಂಬೆ ಮಸೀದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here