ಪಾಣೆಮಂಗಳೂರು : ಸಲ್-ಸಬೀಲ್ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದ್ವಿತೀಯ ಪಿ.ಯು.ಸಿ ವರೆಗಿನ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದರು. “ಕೊರೋಣ ವಿದ್ಯಾರ್ಥಿ ಜೀವನದ ಮೇಲೆ ಬೀರಿದ ಪರಿಣಾಮ” ಮತ್ತು “ಪ್ರಸಕ್ತ ಇಂಡಿಯಾದಲ್ಲಿ ಸ್ವಾತಂತ್ರ್ಯದ ಪರಿಕಲ್ಪನೆ” ಎರಡರಲ್ಲಿ ಯಾವುದಾದರೂ ಒಂದು ವಿಷಯದ ಕುರಿತು 300 ರಿಂದ 400 ಪದಗಳಿಗೆ ಮೀರದಂತೆ ನಡೆಸಿದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಲ್-ಸಬೀಲ್ ಸಂಘಟನೆಯ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಿದರು.

ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕೌಡೆಲ್ ದಾರುಲ್ ಇಝ್ಝ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿ ಮುಹಮ್ಮದ್ ಉಮರ್ ಮುನೀಶ್ ಬೋಗೋಡಿ ಹಾಗೂ ದ್ವಿತೀಯ ಸ್ಥಾನವನ್ನು ಕೌಡೆಲ್ ದಾರುಲ್ ಇಝ್ಝ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ ಫಾತಿಮತ್ ಝಾಹಿರ ಬೋಗೋಡಿ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಮೆಲ್ಕಾರ್ ವುಮೆನ್ಸ್ ಕಾಲೇಜ್ ವಿದ್ಯಾರ್ಥಿನಿ ಆಹಿಶತ್ ಶದೀದ ಕಾರಾಜೆ ಹಾಗೂ ದ್ವಿತೀಯ ಮೊಡಂಕಾಪು ಕಾರ್ಮೇಲ್ ಪ್ರೌಢಶಾಲೆ ವಿದ್ಯಾರ್ಥಿನಿ ಫಾತಿಮ ಫರೀದ ಪರ್ಲಿಯಾ ಪಡೆದುಕೊಂಡರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು ಎಂದು ಸಂಸ್ಥೆಯ ಕಾರ್ಯದರ್ಶಿ ಉಬೈದ್ ಬೋಗೋಡಿ ಪ್ರಕಟಣೆಯಲ್ಲಿ ತಿಳಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here