ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ ಇಂದು 144 ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9022 ಕ್ಕೆ ಏರಿಕೆಯಾಗಿದೆ.
ಇಂದಿನ 144 ಪ್ರಕರಣಗಳ ಪೈಕಿ ಪ್ರಾಥಮಿಕ ಸಂಪರ್ಕದಿಂದ 21 ಮಂದಿಗೆ ದೃಢಪಟ್ಟಿದೆ. 60 ಮಂದಿಗೆ ಐ.ಎಲ್.ಐ., ಹಾಗೂ 16 ಸಾರಿ ಪ್ರಕರಣ ಪತ್ತೆಯಾಗಿದೆ.
47 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುವುದು.
ಇಂದು 209 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 6654 ಮಂದಿ ಗುಣಮುಖರಾಗಿದ್ದಾರೆ.
ಇಂದು 8 ಮಂದಿ ಸಾವನ್ನಪ್ಪಿದ್ದು, 277 ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪ್ರಸ್ತುತ 2091 ಸಕ್ರೀಯ ಪ್ರಕರಣಗಳಿವೆ.
ಇಂದು ಪತ್ತೆಯಾದ ಪ್ರಕರಣಗಳ ಪೈಕಿ ಮಂಗಳೂರಿನ 88, ಬಂಟ್ವಾಳದ 18, ಪುತ್ತೂರು 8, ಸುಳ್ಯ 1, ಬೆಳ್ತಂಗಡಿ 10 ಹಾಗೂ ಇತರ ಜಿಲ್ಲೆಗಳ 19 ಮಂದಿಗೆ ಸೋಂಕು ತಗುಲಿರುವ ಬಗ್ಗೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದೆ.