



ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ (ನಗರ-ಗ್ರಾಮೀಣ) ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ದಮನಿತ ಸಮುದಾಯಗಳಿಗೆ ಶಕ್ತಿ ತುಂಬಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ ಜನ್ಮದಿನಾಚರಣೆ ಕಾರ್ಯಕ್ರಮ ಶ್ರೀ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಬೆಳ್ತಂಗಡಿ ತಹಶೀಲ್ದಾರ್ ರವರ ಮುಖಾಂತರ ಮನವಿ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಗಂಗಾಧರ ಗೌಡ, ಹಾಲಿ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಜಿ. ಗೌಡ, ಚುನಾಯಿತ ಗ್ರಾಮ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು, ಸಂಚಾಲಕರು, ಕಾರ್ಯಕರ್ತರು ಉಪಸ್ಥಿತರಿದ್ದರು.





