Sunday, April 7, 2024

ದ.ಕ. ಜಿಲ್ಲೆಯಲ್ಲಿ ಇಂದು 177 ಹೊಸ ಕೋವಿಡ್ ಕೇಸ್ : 187 ಮಂದಿ ಗುಣಮುಖ

ಬಂಟ್ವಾಳ: ಜಿಲ್ಲೆಯಲ್ಲಿ ಇಂದು 177 ಕೋವಿಡ್ ಕೇಸ್ ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. 187 ಮಂದಿ ಗುಣಮುಖರಾಗಿದ್ದಾರೆ.
ಇಂದು ಸೋಂಕು ದೃಢಪಟ್ಟವರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ ಎಂಬುದು ಸಮಾಧಾನಕರ ವಿಷಯ.
ಜಿಲ್ಲೆಯಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 9712 ಕ್ಕೆ ಏರಿಕೆಯಾಗಿದೆ. 296 ಮಂದಿ ಮೃತಪಟ್ಟಿದ್ದಾರೆ. 7129 ಮಂದಿ ಗುಣಮುಖರಾಗಿದ್ದಾರೆ. ಇನ್ನು ಪ್ರಸ್ತುತ 2287 ಸಕ್ರೀಯ ಪ್ರಕರಣಗಳಿವೆ.
ಇಂದು ದೃಢಪಟ್ಟ ಸೋಂಕಿತರ ಪೈಕಿ 29 ಪ್ರಕರಣ ಪ್ರಾಥಮಿಕ ಸಂಪರ್ಕದಿಂದ ದೃಢಪಟ್ಟಿದೆ. 88 ಐ.ಎಲ್.ಐ., 17 ಸಾರಿ ಪ್ರಕರಣ ದೃಢಪಟ್ಟಿವೆ. ಇನ್ನುಳಿದ 43 ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುವುದು.
ಇಂದಿನ 177 ಪ್ರಕರಣಗಲ್ಲಿ ಮಂಗಳೂರಿನ 107, ಬಂಟ್ವಾಳದ 14, ಪುತ್ತೂರಿನ 16, ಸುಳ್ಯ ಹಾಗೂ ಬೆಳ್ತಂಗಡಿ ತಲಾ 12 ಹಾಗೂ ಇತರ ಜಿಲ್ಲೆಗಳ 16 ಮಂದಿಗೆ ಸೋಂಕು ತಗಲಿರುವ ಬಗ್ಗೆ ಮಾಹಿತಿ ಇದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...