ವಿಟ್ಲ: ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಹಾಗೂ ವಿಟ್ಲ ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ವತಿಯಿಂದ 22ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವೂ ಆ.22 ರಂದು ಶನಿವಾರ ವಿಟ್ಲದ ಮಂಗಳಾ ಮಂಟಪ ಶ್ರೀ ರಾಮ ನಗರ ಚಂದಳಿಕೆಯಲ್ಲಿ ಜರಗಲಿದೆ.
ಬೆಳಿಗ್ಗೆ 7 ಗಂಟೆಗೆ 12ಕಾಯಿಗಳ ಗಣಪತಿ ಹೋಮ, 8 ಗಂಟೆಗೆ ಮೂರ್ತಿ ಪ್ರತಿಷ್ಠೆ ಹಾಗೂ ಬೆಳಗಿನ ಪೂಜೆ, 9 ಗಂಟೆಗೆ ಧ್ವಜಾರೋಹಣ ಹಾಗೂ ದೀಪ ಬೆಳಗಿಸಿ ಉದ್ಘಾಟನೆ.
ನಂತರ 10 ಗಂಟೆಯಿಂದ ಭಜನೆ, ಮದ್ಯಾಹ್ನ 12 ಗಂಟೆಗೆ ಮಹಾಪೂಜೆ, 2 ಗಂಟೆಗೆ ರಂಗಪೂಜೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ.
ಸಂಜೆ 4 ಗಂಟೆಗೆ ವಿಸರ್ಜನಾ ಪೂಜೆ ನಂತರ ವಿಸರ್ಜನೆ ನಡೆಯಲಿದೆ.
ಭಕ್ತಾಧಿಗಳು ಸಾಮಾಜಿಕ ಅಂತರದೊಂದಿಗೆ ಮಾಸ್ಕ್ ಧರಿಸಿಕೊಂಡು ಬಂದು ದೇವರ ದರ್ಶನ ಪಡೆದುಕೊಳ್ಳಬೇಕೆಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಪ್ರಕಟಣೆ ತಿಳಿಸಿದೆ.
ಭಕ್ತರಿಗೆ ಪೂಜೆ ಹಾಗೂ ಇನ್ನಿತರ ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here