ನವದೆಹಲಿ : ರಾಜ್ಯದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಕರ್ನಾಟಕದ ಸಿಂಗಂ ಎಂದೇ ಖ್ಯಾತರಾದ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ಶಾಲು ಹೊದಿಸಿ, ಸೇರ್ಪಡೆ ಆದೇಶ ನೀಡುವ ಮೂಲಕ ಮುರುಳೀಧರ್ ರಾವ್, ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿಕೊಂಡರು. ಈ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಿಂಗಂ ಅಧಿಕೃತವಾಗಿ ಎಂಟ್ರಿ ಕೊಟ್ಟಂತಾಗಿದೆ.
ಬಿಜೆಪಿ ಸೇರ್ಪಡೆಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ಸಾರ್ವಜನಿಕರ ಸೇವೆ ಮಾಡುವ ಸಂಬಂಧ ರಾಜಕೀಯಕ್ಕೆ ಸೇರಿದ್ದೇನೆ. ಮುಂದೆಯೂ ಪೊಲೀಸ್ ವೃತ್ತಿಯಲ್ಲಿ ಮಾಡಿದಂತೆ ರಾಜಕೀಯವಾಗಿಯೂ ಜನರ ಸೇವೆ ಮಾಡಲಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಮುರುಳೀಧರ್ ರಾವ್, ಸಂಬಿತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here