ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ, ದೀರ್ಘ ಕೋಮಾಗೆ ಜಾರಿದ್ದಾರೆ ಎಂದು ಸೇನಾ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರ ಮೂತ್ರಪಿಂಡದಲ್ಲೂ ಸಮಸ್ಯೆಯಾಗಿದ್ದು, ಅವರು ದೀರ್ಘ ಕೋಮಾಗೆ ಜಾರಿದ್ದಾರೆ. ಅವರಿಗೆ ವೆಂಟಿಲೇಟರ್ ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ಆಗಸ್ಟ್ 10ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖರ್ಜಿ ಅವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ತುರ್ತಾಗಿ ಮೆದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಆಪರೇಷನ್ ನಂತರವೂ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂಬ ಮಾಹಿತಿ ಇದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here