ಬಂಟ್ವಾಳ: ತಂತ್ರಜ್ಞಾನವು ಬೆಳೆದಂತೆಲ್ಲ ಅದರ ಬಳಕೆಯು ಹೆಚ್ಚು ವಿಸ್ತೃತವಾಗಬೇಕಾಗಿದೆ. ಕೋವಿಡ್-19ರ ಪರಿಣಾಮವಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತಂತ್ರಜ್ಞಾನ ಬಳಕೆ ಅನಿವಾರ್ಯವಾಗಿದೆ. ಶಿಕ್ಷಣ ಕ್ಷೇತ್ರವೂ ಅದಕ್ಕೆ ಹೊರತಾಗಿಲ್ಲ. ಇಂದು ಒನ್‌ಲೈನ್ ಶಿಕ್ಷಣವು ಅನಿವಾರ್ಯ ಮತ್ತು ಅಗತ್ಯವೂ ಆಗಿದೆ ಎಂದು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಸಹಾಯ ಪ್ರಾಧ್ಯಾಪಕ ಪ್ರೊ. ರಾಘೇಶ್ ರಾಜು ಹೇಳಿದರು.
ಅವರು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ಡೆವಲಪ್‌ಮೆಂಟ್ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ರತಿಯೊಬ್ಬ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳೂ ಈ ಶಿಕ್ಷಣ ಕ್ರಮವನ್ನು ರೂಢಿಸಿಕೊಳ್ಳಬೇಕಾದುದು ಇಂದಿನ ಅನಿವಾರ್ಯತೆಯಾಗಿದೆ ಎಂದವರು ಹೇಳಿದರು. ಪ್ರಾತ್ಯಕ್ಷಿಕೆಯ ಮೂಲಕ ದಿನವಿಡೀ ಅನ್‌ಲೈನ್ ತರಗತಿ ಬಗ್ಗೆ ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಘಟಕದ ಸಂಯೋಜಕ ಡಾ| ಟಿ.ಕೆ.ರವೀಂದ್ರನ್ ಸ್ವಾಗತಿಸಿದರು. ಐಕ್ಯೂಎಸಿ ಘಟಕದ ಸಹ ಸಂಯೋಜಕಿ ಅಖಿಲಾ ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here