



ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶಿಕ್ಷಕ ಮಿತ್ರ ಆ್ಯಪ್ ಮೂಲಕ ಈ ವರ್ಷದಿಂದಲೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಶಿಕ್ಷಕ ಮಿತ್ರ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ವರ್ಗಾವಣೆಯ ಅರ್ಜಿಗಳನ್ನು ಆಪ್ ಮೂಲಕವೇ ಪಡೆಯಲಾಗುವುದು. ಶಿಕ್ಷಕರ ವಿಚಾರದಲ್ಲಿ ಸರ್ಕಾರ ಯಾವಗಲು ಪ್ರೋತ್ಸಾಹಿಸುತ್ತಿದ್ದು, ಶಿಕ್ಷಕರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿದೆ ಎಂದರು. ಶಿಕ್ಷಕರು ತಮ್ಮ ಕೆಲಸಗಳಿಗಾಗಿ ರಜೆ ತೆಗೆದುಕೊಂಡು ಇಲಾಖೆಯ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಶಿಕ್ಷಕರಿಗೆ ಅನುಕೂಲವಾಗುವಂತೆ ಬಜೆಟ್ ನಲ್ಲಿ ಘೋಷಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಂತ್ರಜ್ಞಾನಾಧಾರಿತ ಶಿಕ್ಷಕ ಮಿತ್ರ- ಆ್ಯಪ್ ತಯಾರಿಸಿದೆ. ಶಿಕ್ಷಕರು ತಮ್ಮ ಮೊಬೈಲ್ ಪೋನ್ ಮೂಲಕ ಈ ಆಪ್ನ್ನು ಡೌನ್ಲೋಡ್ ಮಾಡಿಕೊಂಡು ತಾವು ಕುಳಿತಲ್ಲೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದರು.





