ಬೆಳ್ತಂಗಡಿ : ಕುರಿ ಮೇಯಿಸುತ್ತಿದ್ದ ಯುವತಿಯ ಮೇಲೆ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಸಿದ ಘಟನೆ ಉಜಿರೆಯ ನಿನ್ನಿಕಲ್ಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಸಾದಿಕ್‌ ಎನ್ನಲಾಗಿದೆ.
ಯುವತಿಯು ನಿನ್ನಿಕಲ್ಲು ಎಂಬಲ್ಲಿ ರಸ್ತೆಯ ಬದಿಯಲ್ಲಿ ಕುರಿಗಳನ್ನು ಮೇಯಿಸುತ್ತಿದ್ದಳು. ಈ ವೇಳೆ ಸಾದಿಕ್‌ ಆಕೆಯ ಕೈ ಎಳೆದು ಬಲತ್ಕಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಯುವತಿ ಜೋರಾಗಿ ಕಿರುಚಿಕೊಂಡಿದ್ದು, ಆಕೆಯ ಸಹೋದರ ಅಲ್ಲಿಗೆ ಧಾವಿಸಿದ್ದು, ಆತ ಸಾದಿಕ್‌‌ಗೆ ಥಳಿಸಿದ್ದಾನೆ. ಬಳಿಕ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಬಂದ ಸ್ಥಳೀಯರು ಆರೋಪಿಯನ್ನು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here