



ಮಂಗಳೂರು: ರಾಜ್ಯದ ಕೆಲವು ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು,’ ಸೆಪ್ಟೆಂಬರ್ 1 ರಿಂದ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡುವ ಬಗ್ಗೆ ಮುಜರಾಯಿ ಇಲಾಖೆಯು ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದು, ಆರೋಗ್ಯ ಇಲಾಖೆ ಶಿಫಾರಸು ಮಾಡಿದರೆ ಮಾತ್ರ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡಲಾಗುತ್ತದೆ. ಆದರೆ ಅನ್ನ ಸಂತರ್ಪಣೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿರುವುದಾಗಿ ಮಾಹಿತಿ ಇದೆ.






