ಪುಲ್ವಾಮ :ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಇಂದು ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ ಘಟನೆ ನಡೆದಿದೆ.
ಜಮ್ಮು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ, ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆಯ ಪರಿಣಾಮವಾಗಿ ಪುಲ್ವಾಮದಲ್ಲಿನ ಝಡೂರ ಪ್ರದೇಶದಲ್ಲಿ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ವರದಿಯಾಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಭಾರತೀಯ ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎನ್ ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾಗಿರುವ ಉಗ್ರರು ಯಾವ ಸಂಘಟನೆಯವರು ಎಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ನಿನ್ನೆ ರಾತ್ರಿ 1 ಗಂಟೆಗೆ ಈ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಹೇಳಲಾಗುತ್ತಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here