ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಯುವ ಮೋರ್ಚ ಗ್ರಾಮಾಂತರ ಮಂಡಲ ಬಿಜೆಪಿ ಮಹಾಶಕ್ತಿ ಕೇಂದ್ರ ವಿಟ್ಲ ಇದರ ಸಹಯೋಗದಲ್ಲಿ ಇಂದು ಬೆಳ್ಳಿಗೆ 8.30 ರಿಂದ ಸಂಜೆ 5 ಗಂಟೆಯ ವರೆಗೆ ವಿಟ್ಲ ದ.ಕ. ಜಿ.ಪಂ. ಮಾ.ಹಿ. ಪ್ರಾ. ಶಾಲೆಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು.

ಸಭೆಯಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಗೌಡ ಮುಂಗ್ಲಿಮನೆ, ಯುವ ಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು,  ಪ್ರಧಾನ ಕಾರ್ಯದರ್ಶಿ ರತನ್ ರೈ ಕುಂಬ್ರ, ಜಿ.ಪಂ. ಸದಸ್ಯೆ  ಜಯಶ್ರೀ ಕೊಡಂದೂರು, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯ್ತೋಟ್ಟು, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ  ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ್ ಹಾಗೂ ಪಕ್ಷದ ವಿವಿದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here