


ಕಲ್ಲಡ್ಕ: ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರ ಹಾಗೂ ಬಿಜೆಪಿ ಯುವ ಮೋರ್ಚದ ವತಿಯಿಂದ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಕಾರ್ಯಕ್ರಮ ವೀರಕಂಬ ಶ್ರೀ ಶಾರದ ಭಜನಾ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸಂದೇಶ ಕುಮಾರ್ ಶೆಟ್ಟಿ ಅರೆಬೆಟ್ಟು ರವರು ದೀಪ ಬೆಳಗಿಸಿ ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತನಾದರೆ ದೇಶವೇ ಆರೋಗ್ಯವಂತ ದೇಶವಾಗುತ್ತದೆ. ಆರೋಗ್ಯದ ಬಗ್ಗೆ ಗಮನ ನೀಡುವುದು ಅಗತ್ಯವಾಗಿದ್ದು, ಕೇಂದ್ರ ಸರಕಾರದ ಆಯುಷ್ಮಾನ್ ಕಾರ್ಡು ಪ್ರತಿಯೊಬ್ಬರಿಗೂ ಆಪತ್ಕಾಲದಲ್ಲಿ ಸಹಕಾರಿಯಾಗುತ್ತದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಣಿ ಶಕ್ತಿಕೇಂದ್ರದ ಅಧ್ಯಕ್ಷ ರೊನಾಲ್ಡ್ ಡಿಸೋಜ ವಹಿಸಿದ್ದರು.
ವೇದಿಕೆಯಲ್ಲಿ ಶ್ರೀ ಶಾರದಾ ಭಜನಾ ಮಂದಿರದ ಸಂಚಾಲಕ ನಾರಾಯಣ ಭಟ್ ಬೆತ್ತ ಸರವು, ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ತಾ.ಪಂ. ಸದಸ್ಯೆ ಗೀತ ಚಂದ್ರಶೇಖರ್ ನೆರಳಕಟ್ಟೆ, ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಆಗಮಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಸೀಮಾ ಮಾಧವ, ವೀರಕಂಬ ಗ್ರಾ.ಪಂ. ನಿಕಟಪೂರ್ವ ಸದಸ್ಯ ಜಯಂತಿ ಜನಾರ್ಧನ್, ಉದ್ಯಮಿ ಶ್ರೀದೇವಿ ಕನ್ಟ್ರಕ್ಷನ್ ಮಾಲಕ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಬಿಜೆಪಿ ಹಿಂದುಳಿದ ವರ್ಗದ ಸದಸ್ಯ ವೀರಪ್ಪ ಮೂಲ್ಯ, ವೀರಕಂಬ ಗ್ರಾಮ ಭೂತ ಸಮಿತಿಯ ಅಧ್ಯಕ್ಷರುಗಳಾದ ದಿನೇಶ್ ಪೂಜಾರಿ ಹಾಗೂ ಸದಾಶಿವ, ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಬೆತ್ತ ಸರವು ಹಾಗೂ ರಮೇಶ್ ಗೌಡ ಮೈರ, ಬಿಜೆಪಿ ಎಸ್.ಟಿ. ಮೋರ್ಚಾದ ಸದಸ್ಯರಾದ ಕೇಶವ ನಾಯ್ಕ ಕೆಮ್ಮಟೆ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಬಾಯಿಲ, ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಉಪಸ್ಥಿತರಿದ್ದರು. ಸುಮಾರು 673 ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು.






