


ಬಂಟ್ವಾಳ: ಹಿಟ್ ಎಂಡ್ ರನ್ ದ್ವಿಚಕ್ರವಾಹನ ಸವಾರ ಗಂಭೀರ ಸ್ವರೂಪದ ಗಾಯಗಳಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ವೇಳೆ ಬಿ.ಸಿ.ರೋಡು ಸರ್ಕಲ್ ಬಳಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಂಟ್ವಾಳ ಪಲ್ಲಮಜಲು ನಿವಾಸಿ ಪ್ರಕಾಶ್ ಆರ್ ಚೌಟ ಎಂದು ವಾಹನದಲ್ಲಿದ್ದ ಲೈಸೆನ್ಸ್ ನಲ್ಲಿ ವಿಳಾಸವಿದ್ದು, ಹೆಚ್ಚಿನ ವಿವರ ಇನ್ನಷ್ಟೆ ತಿಳಿಯಬೇಕಾಗಿದೆ.
ಪಾಣೆಮಂಗಳೂರು ಕಡೆಯಿಂದ ಬಿ.ಸಿ.ರೋಡು ಕಡೆಗೆ ಅವರು ದ್ವಿಚಕ್ರವಾಹನದಲ್ಲಿ ಬರುತ್ತಿರುವ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಹೇಳಲಾಗುತ್ತಿದೆ.
ತಲೆಗೆ ಗಂಭೀರ ಗಾಯಗೊಂಡ ಪ್ರಕಾಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ ಭೇಟಿ ನೀಡಿ ಪರಾರಿಯಾದ ಕಾರಿನ ಬಗ್ಗೆ ಸಿ.ಸಿ.ಕ್ಯಾಮಾರದಲ್ಲಿ ಮಾಹಿತಿ ಪಡೆಯಲಾಗುತ್ತಿದೆ.





