ಮೂಡಬಿದ್ರಿ : ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದ ಘಟನೆ ಮೂಡಬಿದಿರೆ ಸಮೀಪ ಬಡಗ ಮಿಜಾರು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೃತ ಯುವಕನನ್ನು ಮೂಡಬಿದಿರೆಯ ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡರ ಪುತ್ರ ಉಮೇಶ್ ಗೌಡ(35) ಎಂದು ಗುರುತಿಸಲಾಗಿದೆ.
ನಿನ್ನೆ ಮಧ್ಯರಾತ್ರಿ ಯಾರೋ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಕಡಿದು ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.
ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ
ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here