Wednesday, April 17, 2024

ನೆರೆ ರಾಜ್ಯಕ್ಕೆ ಶೀಘ್ರವೇ ಬಸ್ ಸಂಚಾರ ಆರಂಭ : ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯ ಸರ್ಕಾರವು ಅಂತರರಾಜ್ಯ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೀಘ್ರದಲ್ಲೇ ನೆರೆ ರಾಜ್ಯಗಳಿಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶದ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. ನೆರೆ ರಾಜ್ಯಗಳಾದ ತಮಿಳುನಾಡು, ಕೇರಳ, ತೆಲಂಗಾಣ, ಪಾಂಡಿಚೇರಿ ರಾಜ್ಯಗಳಿಗೆ ಪತ್ರ ಬರೆಯಲಾಗಿದ್ದು, ಆಂಧ್ರಪ್ರದೇಶ ತನ್ನ ಒಪ್ಪಿಗೆ ನೀಡಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...