Wednesday, April 10, 2024

ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ: ಓರ್ವ ಆರೋಪಿಯನ್ನು ಬಂಧಿಸಿದ ಎಸ್.ಐ. ಅವಿನಾಶ್

ಬಂಟ್ವಾಳ: ರಾಜ್ಯದಲ್ಲಿ ಬಿಸಿ ಬಿಸಿ ಸುದ್ದಿಯ ಮಧ್ಯೆ ಬಂಟ್ವಾಳ ತಾಲೂಕಿನಲ್ಲಿಯೂ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಪತ್ತೆ ಮಾಡಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಅಹಮ್ಮದ್ ಸಾಬಿತ್ (30) ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.

ಬಂಧಿತರ ಕೈಯಿಂದ 39 ಕೆ.ಜಿ. 948 ಗ್ರಾಂ ತೂಕದ 19,97,400 ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಅಹಮ್ಮದ್ ಸಾಬಿತ್ ಮತ್ತು ಆತನ ಚಿಕ್ಕಮ್ಮನ ಮಗ ಇಬ್ಬರು ಸೇರಿ ಮಾದಕ ವಸ್ತುವಾದ ಗಾಂಜಾವನ್ನು ಪರ್ಲಿಯಾ ಬಾಡಿಗೆ ಕೊಠಡಿಯಲ್ಲಿ ದಾಸ್ತಾನು ಇರಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಸ್.ಪಿ. ಲಕ್ಮೀಪ್ರಸಾದ್ ಅವರ ನಿರ್ದೇಶನದಂತೆ ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ವಾಳ ಎಸ್.ಐ. ಅವಿನಾಶ್ ಅವರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...