Saturday, October 21, 2023

ಕರಾವಳಿ ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ

Must read

ಬೆಂಗಳೂರು: ರಾಜ್ಯದ ಕರಾವಳಿ ಭಾಗವಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಾಳೆ(ಸೆ.11) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಮೂರೂ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿದೆ. ರಾಜ್ಯದಲ್ಲಿ ಸೆ.14 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗರಿಷ್ಠ 2.6 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಸಿದ್ದಾರೆ.

ಈ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ : ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುರುವಾರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ.

ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮನವಿ ಮಾಡಿದ್ದಾರೆ. ವಿದ್ಯುತ್ ಕಂಬಗಳು, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಸೂಚಿಸಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿರುವಂತೆ ಡಿ.ಸಿ. ಆದೇಶಿಸಿದ್ದಾರೆ.

 

More articles

Latest article