Saturday, April 6, 2024

ಇಡ್ಕಿದು: ಆತ್ಮ ನಿರ್ಭರ್ ಭಾರತ್ ಸ್ವ ಉದ್ಯೋಗ ಮಾಹಿತಿ ಶಿಬಿರ

ವಿಟ್ಲ: ಇಡ್ಕಿದು ಗ್ರಾ.ಪಂ ವ್ಯಾಪ್ತಿಯ ಇಡ್ಕಿದು ಸಹಕಾರಿ ಪಂಚಾಮೃತದ ಅಡ್ಯಾಲು ಕರೆ ಶಾಖೆ ಕಬಕದಲ್ಲಿ ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ ಭಾರತ ಸರಕಾರದ ಆತ್ಮ ನಿರ್ಭರ್ ಭಾರತ್ ಸ್ವ ಉದ್ಯೋಗ ಮಾಹಿತಿ ಶಿಬಿರ ಹಾಗೂ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾರದ ಹಲವು ಜನಪರ ಯೋಜನೆಗಳಲ್ಲಿ ಆತ್ಮ ನಿರ್ಭರ್ ಭಾರತ್ ಯೋಜನೆಯು ಒಂದಾಗಿದ್ದು, ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜೀವನ ನಡೆಸುತ್ತಿರುವವರ ಬಾಳು ಹಸನಾಗಬೇಕು ಮತ್ತು ಸ್ವ ಉದ್ಯೋಗ ಮಾಡಿಕೊಂಡು ನೆಮ್ಮದಿಯ ಬದುಕು ಸಾಗಿಸಲು ಪೂರಕವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಎಲ್ಲಾ ಯೋಜನೆಗಳನ್ನು ಕಟ್ಟ ಕಡೆಯ ಜನಸಾಮಾನ್ಯನಿಗೂ ಮುಟ್ಟುವಂತೆ ಕಾರ್ಯೋನ್ಮುಖವಾಗಬೇಕು ಎಂದರು.
ಸಮಾರಂಭದಲ್ಲಿ ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲದ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾದ ಉಷಾಚಂದ್ರ, ಪ್ರ.ಕಾರ್ಯದರ್ಶಿ ದಯಾನಂದ ಶೆಟ್ಟಿ, ಪುಣಚ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್, ಕಬಕ ತಾಲೂಕು ಪಂಚಾಯಿತಿ ಸದಸ್ಯರಾದ ದಿವ್ಯ ಪುರುಷೋತ್ತಮ, ಬಿ.ಜೆ.ಪಿ ಮಂಡಲದ ಕೋಶಾಧಿಕಾರಿ ರಮೇಶ್ ಭಟ್.ಎಂ.ಎಚ್ ಉಪಸ್ಥಿತರಿದ್ದರು.
ಈ ಕಾರ್ಯಾಗಾರದ ಮಾಹಿತಿ ಶಿಬಿರದಲ್ಲಿ ಸ್ವ ಉದ್ಯೋಗಗಳ ಬಗ್ಗೆ ಪುತ್ತೂರು ವಿವೇಕಾನಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಮಾಹಿತಿ ನೀಡಿದರು. ಸಾಲ ಸೌಲಭ್ಯಗಳ ಮಾಹಿತಿಯನ್ನು ಪುತ್ತೂರು ಅಮೂಲ್ಯ ಆರ್ಥಿಕ ಸಾಕ್ಷರತೆ ಕೇಂದ್ರ ಸೀನಿಯರ್ ಕೌನ್ಸಿಲರ್ ಗೋಪಾಲಕೃಷ್ಣ ಭಟ್ ನೀಡಿದರು.
ಈ ಕಾರ್ಯಗಾರದಲ್ಲಿ ವಿವಿಧ ಶಕ್ತಿಕೇಂದ್ರಗಳ ಪ್ರಮುಖರು ಮತ್ತು ಮಹಿಳಾ ಪ್ರತಿನಿಧಿಗಳು ಭಾಗವಹಿಸಿದ್ದರು. ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ ಸ್ವಾಗತಿಸಿದರು. ಕುಮಾರಿ ವಿಶಂತಿ ಶೆಟ್ಟಿ ಉರಿಮಜಲು ಪ್ರಾರ್ಥಿಸಿದರು. ಇಡ್ಕಿದು ತಾಲೂಕು ಪಂಚಾಯತ್ ಸದಸ್ಯೆ ವನಜಾಕ್ಷಿ ಎಸ್.ಭಟ್ ವಂದಿಸಿದರು. ಇಡ್ಕಿದು ಶಕ್ತಿ ಕೇಂದ್ರದ ಸಂಚಾಲಕರಾದ ಯಂ. ಸುಧೀರ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...