Wednesday, April 10, 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರಿಯಾಳ ಹಾಗೂ ಗುರು ಸಮಾಜ ಸೇವಾ ಸಂಘ ಕುರಿಯಾಳ ಇದರ ಜಂಟಿ ಆಶ್ರಯದಲ್ಲಿ ಉಚಿತ ಅಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣೆ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಬಂಟ್ವಾಳ, ಬಿಸಿರೋಡ್ ವಲಯದ ಕುರಿಯಾಳ ಒಕ್ಕೂಟ ಹಾಗೂ ಗುರು ಸಮಾಜ ಸೇವಾ ಸಂಘ ಕುರಿಯಾಳ ಇದರ ಜಂಟಿ ಆಶ್ರಯದಲ್ಲಿ ಕುರಿಯಾಳ ಕುಕ್ಕುರಿಯಲ್ಲಿ ಉಚಿತ ಅಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಕುರಿಯಾಳ ಗುತ್ತು ಪ್ರಗತಿ ಪರ ಕೃಷಿಕಾರದ ಮಲ್ಲಿಕಾ ರಘುನಾಥ ಯಸ್. ಪಯ್ಯಡೆ ದೀಪ ಬೆಳಗಿಸಿ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ರೋಡ್ ವಲಯದ ಮೇಲ್ವಿಚಾರಕರಾದ ಕೇಶವ ಕೆ. ಉಪಸ್ಥಿತರಿದ್ದು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರಿಯಾಳ ಗ್ರಾಮದಲ್ಲಿ 15 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಎಲ್ಲರಿಗೂ ಸಹಾಯವಾಗುವಂತ ಸೇವೆ ನೀಡುತ್ತಿದ್ಧಾರೆ. ಅದಕ್ಕೆ ಸಾಕ್ಷಿಯಾಗಿ ಕುರಿಯಾಳ ಗ್ರಾಮದಲ್ಲಿ ಕಳೆದ ಒಂದು ವರ್ಷಗಳಿಂದ ಬಡವರ ಕಷ್ಟದ ಸಮಯದಲ್ಲಿ ಅವರ ಚಿಕಿತ್ಸೆ ವೆಚ್ಚ ಅಥವಾ ಅವರ ಮನೆ ಬೇಕಾಗುವ ಅಗತ್ಯ ವಸ್ತುಗಳನ್ನು ನೀಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಿರುವ ಗುರು ಸಮಾಜ ಸೇವಾ ಸಂಘ ಕುರಿಯಾಳ ಇವರ ಕೆಲಸ ಬಹಳ ಉತ್ತಮವಾದ ಕೆಲಸ ಹಾಗೂ ಕಾರ್ಡ್ ನೋಂದಾವಣೆ ಮಾಡಿ ಜನರಿಗೆ ಸ್ಥಳದಲ್ಲಿ ನೀಡುವ ಕೆಲಸ ಮಾಡಿದ್ದಾರೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಯೋಜನೆಯ ಕುರಿಯಾಳ ಒಕ್ಕೂಟ ಹಾಗೂ ಬಿ.ಸಿ.ರೋಡ್ ವಲಯದ ಅಧ್ಯಕ್ಷ ಶೇಖರ ಸಾಮಾನಿ, ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಕೇಶವ, ಯೋಜನೆಯ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸ್ವಪ್ನ, ರಾಘವ ಪೂಜಾರಿ, ದಾಮೋದರ, ಚಂದ್ರಹಾಸ್, ಕುರಿಯಾಳ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಗಣೇಶ್ ಶೆಟ್ಟಿ, ನಾಗೇಶ್ ಬಂಡಾರಿ ಉಪಸ್ಥಿತರಿದ್ದರು. ಕುರಿಯಾಳ ಒಕ್ಕೂಟದ ಸೇವಾ ಪ್ರತಿ ನಿಧಿ ಅಮಿತಾ ಸ್ವಾಗತಿಸಿ, ವಂದಿಸಿದರು.

 

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...