ಮೈಸೂರು : ಶಾಲಾ ಪ್ರಾರಂಭದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಸೆ. 21 ರಂದು ಶಾಲೆ ತರಗತಿಗಳು ಪ್ರಾರಂಭ ಇಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ಧಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ. 21 ರಿಂದ ಶಾಲೆ ಆರಂಭವಾಗಲಿದ್ದು, ತರಗತಿ ಆರಂಭ ಆಗಲ್ಲ. ಸೆ. 21 ರಿಂದ ಕೇವಲ ಶಾಲೆ ತೆರೆಯಲಿದ್ದು, ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಸೆ.30 ರೊಳಗೆ ಪ್ರವೇಶಾತಿ ಪ್ರಕ್ರಿಯೆ ಮುಗಿಸಬೇಕು ಎಂದರು.
ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಈ ವಿಚಾರವಾಗಿ ಸಮಸ್ಯೆಯಾದರೆ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಲು ಹೇಳಿದರು. ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಯತ್ತ ಪೋಷಕರು ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದು, ಸರ್ಕಾರಿ ಶಾಲೆಗಳಿಗೆ ಎಷ್ಟೇ ಮಕ್ಕಳು ದಾಖಲಾತಿಯಾದರೂ ಕೂಡಾ ಎಲ್ಲರಿಗೂ ಸೂಕ್ತವಾದ ವ್ಯವಸ್ಥೆ ಮಾಡುತ್ತೇವೆ. ಒಂದು ವೇಳೆ ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದಲ್ಲಿ ಈ ಬಗ್ಗೆ ಬಿಇಒ ಅವರಿಂದ ಟಿಸಿ ಕೊಡಿಸುವಂತ ವ್ಯವಸ್ಥೆ ಮಾಡಿಸುತ್ತೇವೆ ಎಂದು ತಿಳಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here