Saturday, April 6, 2024

ಡಿ.ಕೆ. ಶಿವಕುಮಾರ್‍ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ಇಂದು(ಸೋಮವಾರ) ಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ಅವರ ವಿರುದ್ದ ಸಿಬಿಐ ಅಧಿಕಾರಿಗಳು ಎಫ್‌‌‌‌ಐಆರ್‌ ದಾಖಲಿಸಿದ್ದಾರೆ.
ಡಿಕೆಶಿ ಅವರ ಸದಾಶಿವ ನಗರದ ಮನೆ ಸೇರಿದಂತೆ ಏಕಕಾಲದಲ್ಲಿ ಕನಕಪುರದಲ್ಲಿ ಕೂಡಾದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡಿದ್ಧಾರೆ. ಈ ಮಧ್ಯೆ ಡಿ.ಕೆ ಶಿವಕುಮಾರ್‌ ಅವರ ಸಹೋದರ ಡಿ.ಕೆ ಸುರೇಶ್‌ ಅವರ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಸಿಬಿಐನ ಬೆಂಗಳೂರು ಘಟಕದ ಪೊಲೀಸರು ಇಂದು ಬೆಳಿಗ್ಗೆ ಆರು ಗಂಟೆಗೆ ದಾಳಿ ನಡೆಸಿದ್ದು, ಡಿ.ಕೆ ಸಹೊದರರಿಗೆ ಸೇರಿದ ಹಲವು ಕಡೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಸುಮಾರು 60 ಸಿಬಿಐ ತಂಡದ ಅಧಿಕಾರಿಗಳ ತಂಡವು, ಕರ್ನಾಟಕದಲ್ಲಿ 9, ದೆಹಲಿಯಲ್ಲಿ 4, ಮುಂಬೈನಲ್ಲಿ ಒಂದು ಸೇರಿದಂತೆ ಒಟ್ಟು 14 ಕಡೆ ದಾಳಿ ಇಂದು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ದಾಳಿ ಬೆನ್ನಲ್ಲೇ, ಡಿಕೆಶಿ ಅವರ ವಿರುದ್ದ ಸಿಬಿಐನ ಬೆಂಗಳೂರು ಘಟಕದಲ್ಲಿ ಎಫ್‌ಐಆರ್‌ ದಾಖಲಾಗಿದೆ.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...