Saturday, April 6, 2024

ಕಾವೂರು ಮಾರುಕಟ್ಟೆ ಸ್ಥಳಾಂತರ: ಮೇಯರ್ ಹಾಗೂ ಮಾರಾಟಗಾರರ ಮಧ್ಯೆ ಮಾತಿನ ಚಕಮಕಿ

ಮಂಗಳೂರು: ಮಂಗಳೂರು ಸಮೀಪದ ಕಾವೂರು ಮಾರುಕಟ್ಟೆ ಸ್ಥಳಾಂತರ ವಿಚಾರ ಹಿನ್ನೆಲೆಯಲ್ಲಿ ಪರಿಸರದಲ್ಲಿ ಕೆಲಹೊತ್ತು ಅತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮಂಗಳೂರು ಮನಪದಿಂದ ಈ‌ ಹಿಂದಿನ ರಸ್ತೆ ಬದಿ ಮಾರುಕಟ್ಟೆ ತೆರವು ಕಾರ್ಯಚರಣೆ ನಡೆಸಲಾಗಿದೆ.

ಕಾವೂರಿನಲ್ಲಿ ನಿರ್ಮಾಣವಾಗಿರುವ ನೂತನ ಮಾರುಕಟ್ಟೆಗೆ ಮಾರಾಟಗಾರರು ತೆರಳುವಂತೆ ಮಂಗಳೂರು ಮ.ನ.ಪ ಸೂಚನೆ ನೀಡಿತ್ತು.ಆದರೆ ಮನಪ ಸೂಚನೆಗೆ ಕ್ಯಾರೆ ಅನ್ನದ ಮಾರಾಟಗಾರರು ಅಲ್ಲೇ ವ್ಯಾಪಾರ ವಹಿವಾಟು ನಡೆಸಲು ಮುಂದಾಗಿದ್ದರು.

ಈ ಹಿಂದೆ ಮೇಯರ್ ನಿಂದ ಕಾವೂರು ಹಳೆ ಮಾರುಕಟ್ಟೆ ತೆರವು ಕಾರ್ಯಾಚರಣೆ ಕೂಡ ನಡೆದಿತ್ತು.

ಬೀದಿ ಬದಿಯ ಅಂಗಡಿಗಳನ್ನು ತೆರವು ಮಾಡಿದ ಬಳಿಕ ಮನಪ
ತಂತಿ ಬೇಲಿ ಅಳವಡಿಸಿದ್ದಾರೆ.
ಮನಪ ಹಾಕಿದ
ತಂತಿ ಬೇಲಿ ಕಿತ್ತು ಮತ್ತೆ ಮಾರಾಟಕ್ಕಿಳಿದ ಮಾರಾಟಗಾರರು ಸಡ್ಡುಹೊಡೆಯಲು ಮುಂದಾಗಿದ್ದೇ ಇಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಲು ಕಾರಣವಾಗಿತ್ತು.

ಕಾವೂರು ಮಾರಾಟಗಾರರ ವಿರುದ್ದ ಗರಂ ಆಗಿರುವ ಮನಪ
ಇಂದು ಬೆಳ್ಳಂಬೆಳಗೆ ದಾಳಿ ಮಾಡಿದ್ದಾರೆ.

ಸ್ಥಳದಲ್ಲಿ ಮೇಯರ್ ದಿವಾಕರ್ ಪಾಂಡೇಶ್ವರ್
ಮತ್ತು ಮಾರಾಟಗಾರರ ಮಧ್ಯೆ ಮಾತಿನ ಚಕಮಕಿ ನಡೆದು ಕೆಲ ಹೊತ್ತು ಬಿಸಿಬಿಸಿ ವಾತಾವರಣ ನಿರ್ಮಾಣವಾಗಿತ್ತು.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...