ಮೈಸೂರು: ಅ. 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ.
ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ. ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹಾಗೂ ಕೆಲ ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿಕೊಂಡಿದ್ದರು. ಅದರಂತೆ ಇದೀಗ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here