ಮಂಗಳೂರು: ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ದಸರಾ ಆಚರಿಸುವ ಬಗ್ಗೆ ಮಹತ್ವದ ಸೂಚನೆ ನೀಡಿದ್ದಾರೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಅ.17 ರಿಂದ 26 ರ ವರೆಗೆ ದಸರಾವನ್ನು ಸಾರ್ವಜನಿಕರು ಸರಳವಾಗಿ, ಒಂದೆಡೆ 100 ಜನಕ್ಕಿಂತ ಹೆಚ್ಚು ಸೇರದೆ ಆಚರಿಸಬೇಕೆಂದು ಹೇಳಿದ್ದಾರೆ.
ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸದಿದ್ದಲ್ಲಿ ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಸಾಮಾಜಿಕ ಅಂತರವಿಲ್ಲದೆ ನಡೆಸುವ ಕಾರ್ಯಕ್ರಮವನ್ನು ಕಡ್ಡಾಯವಾಗಿ ನಿಷೇಧಿಸಿದೆ. ಹುಲಿ ವೇಷಗಳಿಗೆ ಸೀಮಿತ ಅನುಮತಿ ಸೇರಿದಂತೆ ಮಾರ್ಗಸೂಚಿಗಳು ನವರಾತ್ರಿ ಹಾಗೂ ದುರ್ಗಾ ಪೂಜೆಯ ಆಚರಣೆಗೂ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here