ಬಂಟ್ವಾಳ: ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ವಾಸ್ತುದೋಷ ಕಂಡು ಬಂದಿದೆ ಎಂದು ಸಂಕಲ್ಪಿಸಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ಸನ್ನಿಧಿಯಲ್ಲಿ ಮಹಾ ಮೃತ್ಯುಂಜಯ ಹೋಮ ಸೋಮವಾರ ನಡೆಯಿತು.
ಕಳೆದ ಕೆಲವು ತಿಂಗಳ ಹಿಂದೆ ತಾಲೂಕು ಕಚೇರಿಯ ಇಬ್ಬರು ಉಪತಹಶೀಲ್ದಾರ್ ಗಳು ಅನಾರೋಗ್ಯದಿಂದ ಮೃತಪಟ್ಟಿದ್ದು, ಹೀಗಾಗಿ ಜಿ.ಪಂ.ಸದಸ್ಯರು ಪ್ರಶ್ನಾಚಿಂತನೆ ನಡೆಸಿದ್ದರು. ಕಾರಿಂಜ ದ ವೆಂಕಟರಮಣ ಮುಚ್ಚಿನ್ನಾಯರ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ಮನೋಹರ್ ತಂತ್ರಿಗಳು ಚಂದ್ರಮೌಳೀಶ್ವರ ದೇವಸ್ಥಾನ ಉಡುಪಿ ಇವರ ವೈದಿಕ ವಿಧಿ ವಿಧಾನದಲ್ಲಿ ಹೋಮ ನಡೆಸಲಾಗಿದೆ ಎಂದು ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ತಿಳಿಸಿದರು.


ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡ ಹೋಮದ ಧಾರ್ಮಿಕ ವಿಧಿವಿಧಾನಗಳು ಅಪರಾಹ್ನ 12.30 ಕ್ಕೆ ಪೂರ್ಣಾಹುತಿಯೊಂದಿಗೆ ಸಮಾಪನಗೊಂಡಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಜಿ.ಪಂ.ಸದಸ್ಯರಾದ ರವೀಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here