


ವಿಟ್ಲ: ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ ನಡೆದಿದ್ದು, ಅಂಗಡಿಗಳೆರಡು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಇಲ್ಲಿನ ಕೆಜೆ ಟವರ್ಸ್ನ ಅಂಗಡಿ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಪಿಎಂ ಹಾರ್ಡ್ವೇರ್ ಮತ್ತು ಆಗ್ರೋ ಸಪ್ಲೆಯರ್ ಅಂಗಡಿಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದರೆ, ಬೆಂಕಿ ತೀವ್ರತೆ ಹೆಚ್ಚಿದ್ದು, ಪರಿಣಾಮ ಪಕ್ಕದ ಬೇಕರಿ ಕೂಡ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಈ ಅಗ್ನಿ ಅವಘಡಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ರೀತಿ ದುರುಂತ ನಡೆದಿರಬಹುದು ಎಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ.





