Friday, October 27, 2023

ಸುರೇಂದ್ರ ಬಂಟ್ವಾಳ್ ಹತ್ಯೆಗೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳು ಪೋಲೀಸ್ ಕಸ್ಟಡಿಗೆ

Must read

ಬಂಟ್ವಾಳ: ಬೈಪಾಸ್ ಭಂಡಾರಿಬೆಟ್ಟು ವಸ್ತಿ ರೆಸಿಡೆನ್ಸಿಯಲ್ಲಿ ನಡೆದ ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಆರೋಪಿಗಳನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಶಿವಮೊಗ್ಗರವರು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೋಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಈವರೆಗೆ ಒಟ್ಟು ಐದು ಆರೋಪಿಗಳ ಬಂಧನವಾಗಿದ್ದು, ಆರೋಪಿಗಳು ಪೋಲೀಸ್ ಕಸ್ಟಡಿಯಲ್ಲಿದ್ದಾರೆ. ಉಳಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಕೆಲವು ಮಂದಿ ಬಂಧನವಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಇದೆ.
ಪ್ರಮುಖ ಹಂತಕರಾದ ಸತೀಶ್ ಕುಲಾಲ್ ಹಾಗೂ ಗಿರಿ ಯಾನೆ ಗಿರೀಶ್ ಕಿನ್ನಿಗೊಳಿ ಜೊತೆಯಲ್ಲಿ ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹತ್ಯೆಯ ಆರೋಪಿಗಳಾದ ಸತೀಶ್ ಮತ್ತು ಗಿರೀಶ್ ಎಂಬವರ ಬಂಧನ ಬಳಿಕ ತನಿಖೆಯ ವೇಳೆ ತಿಳಿದು ಬಂದಂತೆ ಮೂವರು ಆರೋಪಿಗಳ ಬಂಧನವಾಗಿದೆ.
ಇವರ ತನಿಖೆಯಲ್ಲಿ ಇನ್ನಷ್ಟು ಆರೋಪಿಗಳ ಬಗ್ಗೆ ಸುಳಿವು ನೀಡಿದ್ದು, ಶೀಘ್ರವಾಗಿ ಬಂಧನವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಕೊಲೆ ಆರೋಪಿಗಳ ತನಿಖೆ ನಡೆಸುತ್ತಿದ್ದು, ಬಂಟ್ವಾಳ ಪಿ.ಎಸ್.ಐ.ಗಳಾದ ಪ್ರಸನ್ನ, ಅವಿನಾಶ್, ರಾಜೇಶ್ ಕೆ.ವಿ.ಕಲೈಮಾರ್ ಹಾಗೂ ಬೆಳ್ತಂಗಡಿ ಎಸ್.ಐ.ನಂದಕುಮಾರ್ ತನಿಖೆಯಲ್ಲಿ ಸಹಕರಿಸುತ್ತಿದ್ದಾರೆ.

More articles

Latest article