Wednesday, April 10, 2024

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ: ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ : ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇರಳಕಟ್ಟೆ ಯೇನಪೋಯ ವೈದ್ಯಕೀಯ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ಮಾವಿನಕಟ್ಟೆ ಶಿವನಗರ ಶಾಲಾ ವಠಾರದಲ್ಲಿ ನಡೆಯಿತು.
ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ತುಳುನಾಡಿನ ಜನತೆಯನ್ನು ಒಗ್ಗೂಡಿಸಿ ತುಳು ಭಾಷೆ, ಸಂಸ್ಕೃತಿ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಕಾರ್ಯ ಅಭಿನಂದನೀಯ. ಜನರು ಸಂಘಟಿತರಾದಾಗ ಹೋರಾಟಕ್ಕೆ ಶಕ್ತಿ ತುಂಬುವುದು ಎಂದರು.


ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಚಿಂತನೆ ಇದೆ. ನಮ್ಮ ಜಿಲ್ಲೆ, ತುಳುನಾಡಿನ ಬಗ್ಗೆ ಅಭಿಮಾನ ಬೇಕು. ಹಿರಿಯರ ಸಂಪ್ರದಾಯ, ಗೌರವಗಳನ್ನು ಉಳಿಸಿಕೊಂಡು ಹೋಗಬೇಕು ಎಂದರು.
ತುರವೇ ಕೇಂದ್ರ ಸಮಿತಿ ಪದಾಧಿಕಾರಿಗಳಾದ ರಾಘವೇಂದ್ರ ರಾವ್, ಜ್ಯೋತಿಕಾ ಜೈನ್, ಜೋಸೆಫ್, ಫಾರೂಕ್, ರೋಷನ್,ಅಶ್ವತ್ಥ್ , ರಮೇಶ್ ಪೂಜಾರಿ,ಶಿವಣ್ಣ ಎಲ್., ಉದ್ಯಮಿಗಳಾದ ಶ್ರೀಧರ ಪೈ ವಾಮದಪದವು, ಜಯಚಂದ್ರ ಬೊಳ್ಮಾರ್, ಮೋಹನ್ ಶೆಟ್ಟಿ ನರ್ವಲ್ದಡ್ಡ, ಪುರುಷೋತ್ತಮ ಶೆಟ್ಟಿ ವಾಮದಪದವು, ಚಂದ್ರಶೇಖರ ಶೆಟ್ಟಿ, ಹಂಝ ಬಸ್ತಿಕೋಡಿ, ಯಶೋಧರ ಶೆಟ್ಟಿ ದಂಡೆ, ವಿಜಯ ರೈ, ದಿನೇಶ್ ಶೆಟ್ಟಿ ದಂಬೆದಾರ್, ವಸಂತ ಶೆಟ್ಟಿ ಕೇದಗೆ, ಕಮಲ್ ಶೆಟ್ಟಿ ಬೊಳ್ಳಾಜೆ, ಪ್ರಭಾಕರ ಶೆಟ್ಟಿ, ಪದ್ಮನಾಭ ಶೆಟ್ಟಿ, ರಫೀಕ್ ವಾಮದಪದವು, ಚೈನ್ನೈತ್ತೋಡಿ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯತೀಶ್ ಶೆಟ್ಟಿ, ಸದಸ್ಯರಾದ ಅನಂತ ಪೈ, ಜಯರಾಮ ಶೆಟ್ಟಿ ಕಾಪು, ಎಡ್ತೂರು ಘಟಕಾದ್ಯಕ್ಷ ಗಣೇಶ್ ಶೆಟ್ಟಿ ನರ್ವಲ್ದಡ್ಡ, ವಾಮದಪದವು ಘಟಕ ಯುವ ಘಟಕಾಧ್ಯಕ್ಷ ಪ್ರಕಾಶ್ ಪೂಜಾರಿ, ಮಹಿಳಾ ಘಟಕ ಅಧ್ಯಕ್ಷೆ ಜೆಸಿಂತಾ ಡಿಸೋಜ, ಪದಾಧಿಕಾರಿಗಳಾದ ಸುಭಾಷ್ ನಾಯಕ್, ಶುಭ ಲಕ್ಷ್ಮಿ, ಮಮತಾ ಪೂಜಾರಿ, ವನಿತಾ ನಾಯಕ್, ವನಿತಾ, ಹರೀಶ್ ಕುದ್ಕೋಳಿ, ಪ್ರದೀಪ್ ಕುಕ್ಕಿಪಾಡಿ, ಅವಿನಾಶ್ ಬದ್ಯಾರ್, ಯೇನಪೋಯ ವೈದ್ಯಕೀಯ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸುಭಾಷ್ ರೈ, ಡಾ. ಬಾಲಕೃಷ್ಣ ಕುಲಾಲ್, ಡಾ.ಆನಂದ್, ಸಾರ್ವಜನಿಕ ಸಂಪರ್ಕಾಧಿಕಾರಿ ಅಬ್ದುಲ್ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.
ವಾಮದಪದವು ಘಟಕ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷ ಲಾದ್ರೂ ಮಿನೇಜಸ್ ವಂದಿಸಿದರು. ರಂಗ ಕಲಾವಿದ ಪುರುಷೋತ್ತಮ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.
ಶಿಬಿರದಲ್ಲಿ ರಕ್ತದಾನ ಹಾಗೂ ಆಯುರ್ವೇದ ತಜ್ಞರಿಂದ ಆರೋಗ್ಯ ತಪಾಸಣೆ ಮತ್ತು ಉಚಿತ ಆಯುಷ್ ಔಷಧಿ ವಿತರಿಸಲಾಯಿತು.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...