Wednesday, October 18, 2023

ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಛ ಭಾರತ ಅಭಿಯಾನ

Must read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರರಕ್ಷಣಾ ಪಡೆ ಕಾರ್ಯಕರ್ತರಿಂದ ಸೋಮೇಶ್ವರ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ‌ವಾರ್ಡನ್ ಡಾ| ಮುರಲೀಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ| ಮುರಲೀಮೋಹನ್ ಚೂಂತಾರು ಅವರು ಕಡಲತೀರದಲ್ಲಿ ಪರಿಸರ ಸ್ವಚ್ಛವಾಗಿಡಲು ಪ್ಲಾಸ್ಟಿಕ್ ತ್ಯಾಜ್ಯ, ಬಾಟಲುಗಳ ತ್ಯಾಜ್ಯಗಳು ಮೀನುಗಳ ಸಹಿತ ಅನೇಕ ಜೀವ ಸಂಕುಲದ ರಕ್ಷಣೆಗೆ ಮಾರಕವಾಗಿದ್ದು, ಅವುಗಳನ್ನು ಸಮುದ್ರಕ್ಕೆ ಎಸೆಯದಂತೆ ಸಮುದ್ರ ತೀರದಲ್ಲಿ ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಕಸದ ತೊಟ್ಟಿಗಳನ್ನು ಅಲ್ಲಲ್ಲಿ ಇಡುವುದರ ಮುಖಾಂತರ ತ್ಯಾಜ್ಯಗಳು ಸಮುದ್ರದ ನೀರಿಗೆ ಬೀಳದಂತೆ ಜಾಗೃತೆಯನ್ನು ವಹಿಸಬೇಕು ಎಂದು ಕರೆನೀಡಿದರು. ಇದರಿಂದ ನಮ್ಮ ಪರಿಸರದ ಸ್ವಚ್ಛತೆಯನ್ನು ಕಾಪಾಡುವುದಲ್ಲದೆ, ನಮ್ಮೆಲ್ಲರ ಆರೋಗ್ಯ ಹಿತದೃಷ್ಟಿಯಿಂದ ನಾವೆಲ್ಲರೂ ಸ್ವಚ್ಛತಾ ಜಾಗೃತಿಯನ್ನು ನಡೆಸಬೇಕು ಎಂದರು.

More articles

Latest article