Friday, October 27, 2023

ರಾಜ್ಯ ಬಿ.ಜೆ.ಪಿ.ಯ ವಿಶೇಷ ಕಾರ್ಯಕಾರಿಣಿ ಸಭೆ

Must read

ಮಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಹೆಸರಲ್ಲಿ ಮತಾಂತರ ಪ್ರಕರಣಗಳು ಹೆಚ್ಚುತ್ತಿದ್ದು, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.


ಅವರು ಇಂದು (ನ.5) ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿ.ಜೆ.ಪಿ.ಯ ವಿಶೇಷ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿನ ಹೆಚ್ಚಿನ ವರದಿಗಳು ಲವ್ ಜಿಹಾದ್ ಹೆಸರಲ್ಲಿ ಮತಾಂತರವಾಗುತ್ತಿರುವುದನ್ನು ಪುಷ್ಟೀಕರಿಸಿವೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದು, ಡ್ರಗ್ಸ್ ಅನ್ನು ಮಟ್ಟ ಹಾಕಲು ಸರಕಾರ ದೃಢ ಹೆಚ್ಚೆ ಇಟ್ಟಿದೆ ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್‍ ಕಟೀಲ್ ಅಧ್ಯಕ್ಷತೆ ವಹಿಸಿದ್ದರು.
ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿ.ಜೆ.ಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಸಚಿವರಾದ ಆರ್‍. ಅಶೋಕ್, ಜಗದೀಶ್ ಶೆಟ್ಟರ್‍, ಕೆ,ಎಸ್. ಈಶ್ವರಪ್ಪ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ವಾಗತಿಸಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿರವಿಕುಮಾರ್‍ ಕಾರ್ಯಕ್ರಮ ನಿರೂಪಿಸಿದರು.

More articles

Latest article