ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ನಾಳೆ ನ.22ರ ಭಾನುವಾರ ಉಳ್ಳಾಲ ಕಡಲತೀರದಲ್ಲಿ ಬೆಳಗ್ಗೆ 7 ರಿಂದ 8.30ರ ವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ. ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ನೇತೃತ್ವದಲ್ಲಿ ನಡೆಯಲಿರುವುದು. ಆಸಕ್ತಿ ಇರುವ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here