ಬಂಟ್ವಾಳ: ಜಿಲ್ಲಾ ಅಪರಾಧ ಗುಪ್ತ ವಾರ್ತಾ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ಸ್‌ಟೇಬಲ್ ಆಗಿರುವ ಪುತ್ತೂರು ಕುಂಬ್ರದ ಉದಯ ರೈ ಮಂದಾರ ಅವರು 2017ನೇ ಸಾಲಿನ ಮುಖ್ಯ ಮಂತ್ರಿಯವರ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದು, ನ. 20ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪದಕ ವಿತರಿಸಿದರು.

ಪ್ರಾರಂಭ ಚಿತ್ರ ಕಲಾವಿದರಾಗಿದ್ದ ಉದಯ ರೈ ಅವರು ಉದಯ ಆರ್ಟ್ಸ್ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ತಮ್ಮ ಪೊಲೀಸ್ ವೃತ್ತಿ ಜೀವನ ಆರಂಭಿಸಿದ್ದು, ಬಳಿಕ ಬೆಳ್ತಂಗಡಿ, ಧರ್ಮಸ್ಥಳದಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಡಿಸಿಐಬಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here