ಬೆಂಗಳೂರು: ಇಂದು ತಮಿಳುನಾಡಿನ ಕೆಲ ಭಾಗಗಳಲ್ಲಿ ‘ ನಿವಾರ್​’ ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 2 ದಿನ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಪರಿಣಾಮ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here