ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೂತನ ಮಾಧ್ಯಮ ಸಲಹೆಗಾರರಾಗಿ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರನ್ಜು ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಅವರು ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಅದೇ ಹಿನ್ನೆಲೆ ಅವರನ್ನು ಇದೀಗ ನೂತನ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂಬ ಮಾಹಿತಿ ಇದೆ.
ಈ ಹಿಂದೆ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ಅವರು ನ.19ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಮಹಾದೇವ್‌ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್‌‌. ಭೃಂಗೀಶ್‌ ಅವರನ್ನು ನೇಮಕ ಮಾಡುವಂತೆ ನ. ರಂದು ಸಿಎಂ ಬಿಎಸ್‌ವೈ ಅವರು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅದರಂತೆ ಎನ್‌‌.ಭೃಂಗೀಶ್‌ ಅವರನ್ನು ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here