ಬಂಟ್ವಾಳ: ಅಮ್ಟಾಡಿಯಲ್ಲಿ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಕೆಂಪುಕಲ್ಲು ಕೋರೆಗೆ ಬಂಟ್ವಾಳ ಕಂದಾಯ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡರು.
ಅಮ್ಟಾಡಿ ಗ್ರಾಮದ ಕೆಂಪುಗುಡ್ಟೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಕೋರೆ ನಡೆಯುತ್ತಿದ್ದ ಖಚಿತ ಮಾಹಿತಿ ಆಧಾರಿಸಿ ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಕಂದಾಯ ಇಲಾಖಾ ಅಧಿಕಾರಿಗಳು ದಾಳಿ ನಡೆಸಿ, ಸ್ಥಳದಲ್ಲಿ ಕೋರೆಯಲ್ಲಿ ಕಲ್ಲು ತೆಗೆಯಲು ಬಳಸುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಹೆಚ್ಚಿನ ತನಿಖೆಗೆ ಪ್ರಕರಣ ವನ್ನು ಗಣಿ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರ ನಿರ್ದೇಶನದಂತೆ ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಗ್ರಾಮಕರಣೀಕ ಅಮೃತ್ ವಂಶಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಹೇಳಿಕೆಯ ನಂತರವೂ ಜಿಲ್ಲೆಯದ್ಯಂತ ಹಲವು ಕಡೆ ಕೆಂಪು ಕಲ್ಲಿನ ಕೋರೆಗಳು ನಡೆಯುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿತುವ ಇಲಾಖಾಧಿಕಾರಿಗಳು ಕೋರೆಗಳಿಗೆ ದಾಳಿ ನಡೆಸಿ ಪ್ರಕರಣಗಳನ್ನು ದಾಖಲಿಸಲು ಮುಂದಾಗಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here