ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಇಂದು (ನ.30) ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇಂದಿನಿಂದಲೇ ನೀತಿಸಂಹಿತೆ ಜಾರಿಯಲ್ಲಿರಲಿದೆ.
ಮೊದಲ ಹಂತದ ಮತದಾನ ಡಿ.​ 22ರಂದು ಹಾಗೂ ಎರಡನೇ ಹಂತದ ಚುನಾವಣೆ ಡಿ.27ಕ್ಕೆ ನಡೆಯಲಿದೆ. ಇಂದಿನಿಂದ ಜಾರಿಯಾಗಲಿರುವ ನೀತಿ ಸಂಹಿತೆ ಡಿ.31ರವರೆಗೂ ಜಾರಿಯಲ್ಲಿರುತ್ತದೆ.
ರಾಜ್ಯ ಚುನಾವಣಾ ಆಯೋಗ ಇಂದು ಬೆಳಗ್ಗೆ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಈ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಎಲ್ಲ ಹೊಸ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ಇನ್ನು ಮಾಡುವಂತಿಲ್ಲ.
ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ಡಿ.30ಕ್ಕೆ ಮತ ಎಣಿಕೆ ನಡೆಯಲಿದೆ. ಸುಮಾರು 5,800 ಗ್ರಾಮ ಪಂಚಾಯಿತಿಗಳ 85,000 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳಿಗೆ ಸ್ಥಳೀಯ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಪ್ರದರ್ಶಿಸಲು ವೇದಿಕೆಯಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಗಳು ಪಕ್ಷಾತೀತವಾಗಿದ್ದರೂ, ಪಕ್ಷಗಳ ಪರೋಕ್ಷ ಹಿತಾಸಕ್ತಿ ಈ ಚುನಾವಣೆಯಲ್ಲಿರುತ್ತದೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here