


ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ದೇವರ ಗರ್ಭಗುಡಿಯಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ಸರಿಪಡಿಸುವ ಬಗ್ಗೆ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿರುವ ಪ್ರಕಾರ ನಡೆಯಬೇಕಾದ ಕಾರ್ಯಗಳ ಬಗ್ಗೆ ಆಡಳಿತ ಮಂಡಳಿಯವರು ಪತ್ರಿಕಾಗೋಷ್ಠಿಯ ಮುಖಾಂತರ ಸ್ಪಷ್ಟ ಮಾಹಿತಿಯನ್ನು ಆದಷ್ಟು ಶೀಘ್ರದಲ್ಲಿ ನೀಡಲಿರುವರು. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ಯಾವುದೇ ವದಂತಿಗಳಿಗೆ ಕಿವಿಕೊಡಬಾರದಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.







