ಬಂಟ್ವಾಳ: ಆಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಬಿಸಿರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಲ್ಲಿ ಡಿ.6. ರಂದು ಬೆಳಿಗ್ಗೆ 10 ಗಂಟೆಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ ಎಂದು ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯಾಹ್ನ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಮಹಾಲಕ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಶ್ರೀ ಶ್ರೀ ಪರಮಪೂಜ್ಯ ಮೋಹನದಾಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ.
ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಬೆಳಿಗ್ಗೆ ಗಂಟೆ 9 ರಿಂದ 10 ರವರೆಗೆ ನವೋದಯ ಮಿತ್ರ ಕಲಾವೃಂದ (ರಿ.) ನೆತ್ತರಕೆರೆ ಹಾಗೂ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಜರಗಲಿದೆ.
ಆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಅನ್ನದಾನಕ್ಕೆ ಹಸಿರುವಾಣಿ ಹೊರೆಕಾಣಿಕೆಗಳನ್ನು ನೀಡುವವರು ಒಂದು ದಿನ ಮುಂಚಿತವಾಗಿ ಸಂಘಟಕರನ್ನು ಸಂಪರ್ಕ ಮಾಡುವಂತೆ ಅಧ್ಯಕ್ಷರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here