ಬಂಟ್ವಾಳ : ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ ಹಂತದವರೆಗೂ ಬಿಜೆಪಿ ಪರ ಒಲವು ಇದೆ, ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಮುಂದಿನ ಹಂತದಲ್ಲಿ ಕಾಂಗ್ರೆಸ್ ಪಕ್ಷದ ದೊಡ್ಡ ದೊಡ್ಡ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಂಟ್ವಾಳ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯ ಡಿ.ಕೆ‌.ಹಂಝ ಮತ್ತವರ ಬೆಂಬಲಿಗರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡ ‌ಬಳಿಕ ಮಾತನಾಡಿದರು. ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ 39 ಗ್ರಾಮಪಂಚಾಯತ್ ಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಪ್ರಮುಖ ನಾಯಕರುಗಳು ಮತ್ತು ಕಾರ್ಯಕರ್ತರ ಪಟ್ಟಿ: 

ಜಗದೀಶ್ ಶೆಟ್ಟಿ ಮವಂತೂರು,ಮಾಜಿ ತಾ.ಪಂ ಸದಸ್ಯ ಹಂಝ ಮಂಚಿ.ಚಂದ್ರಹಾಸ ಕರ್ಕೆರಾ ಅರಳ, ಮುಸ್ತಾಫ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ತಳಮಟ್ಟದ ಬಿಜೆಪಿ ಕಾರ್ಯಕರ್ತರನ್ನು ಗೆಲ್ಲಿಸುವ ಮುಂದಿನ ಗ್ರಾಮಪಂಚಾಯತ್ ಚುನಾವಣೆಗೆ ಬಿಜೆಪಿ ಸನ್ನದ್ಧವಾಗಿದೆ ಎಂದು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಹೇಳಿದರು.

ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳ ಒಳ್ಳೆಯ ಕಾರ್ಯಕರ್ತರನ್ನು ಪಕ್ಷದ ಸಿದ್ಧಾಂತದಡಿಯಲ್ಲಿ ಸ್ವಾಗತಿಸುವುದಾಗಿ ತಿಳಿಸಿದರು.
ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ರೊನಾಲ್ಡ್ ಡಿಸೋಜ, ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ, ರೈತ ಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ, ಕಾರ್ಯದರ್ಶಿಗಳಾದ ರಮಾನಾಥ ರಾಯಿ.ಗಣೇಶ್ ರೈ ಮಾಣಿ.ಸೀತಾರಾಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here