Monday, October 23, 2023

ಮಾಜಿ ಮೇಯರ್ ಕೆ.ಕೆ.ಮೆಂಡನ್ ನಿಧನ

Must read

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಕೃಷ್ಣ ಪ್ಪ ಮೆಂಡನ್ (89) ಶುಕ್ರವಾರ ಅಳಪೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ನಗರ ಪಾಲಿಕೆ ಕಂಕನಾಡಿ, ಅಳಪೆ ವಾರ್ಡ್ ನಿಂದ ನಾಲ್ಕು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದು,ಉಪಾಧ್ಯಕ್ಷ ರಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಗಿದ್ದ ಸಜ್ಜನ ರಾಜಕಾರಣಿಯೆಂದೇ ಗುರುತಿಸಲ್ಪಟ್ಟಿದ್ದರು.
ಅತ್ತಾವರ ಶ್ರೀ ವಿಷ್ಣುಮೂರ್ತಿ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಶ್ವರರಾಗಿದ್ದರು. ಅಳಪೆ ಕರ್ಮಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಕರಾವಳಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಕಂಕನಾಡಿ ಯುವಕ ವೃಂದದ ಸ್ಥಾಪಕ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.ದ.ಕ.ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷರಾಗಿ ಸಾಮಾಜಿಕ ಮುಖಂಡರಾಗಿದ್ದರು.
ಅವರು ಪತ್ನಿ.ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಹಿಲ್ಡಾ ಆಳ್ವ, ಮಾಜಿ ಶಾಸಕ, ಮೊಯಿದೀನ್ ಬಾವ ಸೇರಿದಂತೆ ಹಲವರು ಅಳಪೆ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು.
ಕೇಂದ್ರ ಮಾಜಿ ಸಚಿವರಾದ ಜನಾರ್ದನ ಪೂಜಾರಿ, ಎಂ.ವೀರಪ್ಪ ಮೊಯಿಲಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೋ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನಿಧನಕ್ಕೆ ಸಂತಾಪ ವ್ಯಕ್ತ ಪಡಿಸಿದ್ದಾರೆ.

More articles

Latest article