ಸುಬ್ರಹ್ಮಣ್ಯ: ಪ್ರಾಚೀನ ಕಾಲದಿಂದಲೂ ನಡೆದು ಬರುತ್ತಿರುವ ಹಾಗೂ ವರ್ಷದಲ್ಲಿ ಒಂದೇ ಸಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೆಗೆಯುವ ಮೂಲಮೃತಿಕೆ ಪ್ರಸಾದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ತೆಗೆದು ಭಕ್ತರಿಗೆ ವಿತರಿಸಲಾಯಿತು.

ಕ್ಷೇತ್ರದ ಮೂಲ ಸ್ಥಾನ ಗರ್ಭಗುಡಿಯಿಂದ ಈ ಮೃತಿಕೆ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈದಿಕ ವಿಧಿ-ವಿಧಾನಗಳೊಂದಿಗೆ ಶುಭ ಮುಹೂರ್ತದಲ್ಲಿ ಮೂಲ ಪ್ರಸಾದ ತೆಗೆದು ಭಕ್ತಾದಿಗಳಿಗೆ ನೀಡಿದರು. ಇದು ಮೂಲ ಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಮಹಾಪ್ರಸಾವಾಗಿದ್ದು, ಮೂಲಮೃತಿಕೆ ಪ್ರಸಾದವನ್ನು ವರ್ಷದಲ್ಲಿ ಒಂದು ಬಾರಿ ಮಾತ್ರ ತೆಗೆಯಲಾಗುವುದು. ಕ್ಷೇತ್ರದ ಈ ಮುಖ್ಯ ಪ್ರಸಾದವು ರೋಗ ನಿರೋಧಕ, ಸಂತಾನಕಾರಕ ಮತ್ತು ಚರ್ಮ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬುದು ನಂಬಿಕೆ. ಇದನ್ನು ತೀರ್ಥದಲ್ಲಿ ಸೇವಿಸುವುದರ ಮೂಲಕ ಅಥವಾ ಶರೀರಕ್ಕೆ ರಕ್ಷೆಯಾಗಿ ಕಟ್ಟಿಕೊಳ್ಳುವುದರ ಮೂಲಕ ಭಕ್ತಾದಿಗಳು ಈ ಪ್ರಸಾದವನ್ನು ತಮ್ಮೊಳಗೆ ಧಾರಣೆ ಮಾಡುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here